ಬೆಳಗಾವಿ: ‘ಕರ್ನಾಟಕ ಮಾಹಿತಿ ಹಕ್ಕು ಆಯೋಗವು ಕಳೆದ ಒಂದು ವರ್ಷದಲ್ಲಿ 40 ಸಾವಿರ ದ್ವಿತೀಯ ಮೇಲ್ಮನವಿ ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. ಇದು ರಾಷ್ಟ್ರದಲ್ಲಿಯೇ ದಾಖಲೆಯಾಗಿದೆ’ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯದಲ್ಲಿ ಬೆಳಗಾವಿ ಪೀಠಕ್ಕೆ ಬರುವ ಅರ್ಜಿಗಳ ಪ್ರಮಾಣ ಅತಿ ಹೆಚ್ಚಿದೆ. ವರ್ಷಕ್ಕೆ 6,000 ರಿಂದ 7,000 ವಿಚಾರಣೆಗಳ ಇತ್ಯರ್ಥಕ್ಕಾಗಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಜಿಲ್ಲಾವಾರು ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

‘ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 40ರಿಂದ 60 ಅರ್ಜಿಗಳ ವಿಚಾರಣೆ ಆಫ್ಲೈನ್ ಮತ್ತು ಆನ್ಲೈನನಲ್ಲಿ ನಡೆಯುತ್ತಿದೆ. ಗ್ರಾಮೀಣ ಭಾಗದ ಜನರ ಅರ್ಜಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಡಿಯುವ ನೀರು, ರಸ್ತೆ, ವಿದ್ಯುತ್ ಸರಬರಾಜು, ಸ್ವಚ್ಛತೆ, ಆರೋಗ್ಯ ಮತ್ತು ಇತ್ಯಾದಿ ಮೂಲ ಸೌಕರ್ಯಗಳ ಸಮಸ್ಯೆಗಳ ವಿಚಾರಣೆಗಳು ಇತ್ಯರ್ಥವಾಗುತ್ತಿವೆ. ಮಾಹಿತಿ ನೀಡದೇ ಇರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿ, ವಿಚಾರಣೆ ಸಮಿತಿಯ ಶಿಫಾರಸ್ಸು, ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶಗಳನ್ನು ಮಾಡುತ್ತಿದೆ’ ಎಂದೂ ತಿಳಿಸಿದ್ದಾರೆ.

‘ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿ. 2005 ರ ಅಕ್ಟೋಬರ್ 12ರಂದು ಜಾರಿಗೆ ಬಂದಿದೆ. ಕರ್ನಾಟಕ ರಾಜ್ಯವು ಈ ಕಾಯ್ದೆ ಅನುಷ್ಠಾನಗೊಳಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.