ಶುಕ್ರವಾರ, ಡಿಸೆಂಬರ್ 4, 2020
22 °C

ಗಡಿ ವಿವಾದ ಈಗಾಗಲೇ ಬಗೆಹರಿದಿದೆ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕರ್ನಾಟಕ–ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗಾಗಲೇ ಬಗೆಹರಿದಿದೆ. ಕೆಲವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುತ್ತಿದ್ದಾರೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಕನ್ನಡ–ಮರಾಠಿ ಸಮಸ್ಯೆ ಇಲ್ಲ. ಅದೆಲ್ಲ ಇತ್ಯರ್ಥವಾಗಿದೆ. ನಾವೆಲ್ಲರೂ ಒಂದಾಗಿದ್ದೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮಂಡಳಿಯ 13 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಸಂಘಗಳ ಮೇಲೆ ಹಿಡಿತ ಹೊಂದಿರುವವರು ಆಯ್ಕೆಯಾಗಿದ್ದಾರೆ. ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇದು ಆಯಾ ಅಭ್ಯರ್ಥಿಗಳ ವೈಯಕ್ತಿಕ ಚುನಾವಣೆಯೇ ಹೊರತು, ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು