ಭಾನುವಾರ, ಮೇ 29, 2022
30 °C

ಬೆಳಗಾವಿ: ₹500ರ ನೋಟುಗಳನ್ನು ತೂರಿ ಸಂಭ್ರಮಾಚರಿಸಿದ ಲಖನ್ ಜಾರಕಿಹೊಳಿ ಬೆಂಬಲಿಗ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಭಿಮಾನಿಗಳು ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸುವ ವೇಳೆ‌, ಬೆಂಬಲಿಗರೊಬ್ಬರು ₹500 ಮುಖಬೆಲೆಯ ನೋಟುಗಳನ್ನು ಗಾಳಿಗೆ ತೂರಿ ಸಂಭ್ರಮಿಸಿದ್ದಾರೆ.

ಆ ವ್ಯಕ್ತಿ ಯಾರು ಎನ್ನುವುದು ನಿಖರವಾಗಿ ತಿಳಿದುಬಂದಿಲ್ಲ. ಆದರೆ, ಅವರು ನೋಟನ್ನು ತೂರಿದ್ದನ್ನು ಸ್ಥಳೀಯರೊಬ್ಬರು ವಿಡಿಯೊ ಮಾಡಿದ್ದಾರೆ. ಸಾವಿರಾರು ರೂಪಾಯಿಯನ್ನು ಅವರು ಎಸೆದರು. ಅದನ್ನು ಆಯ್ದುಕೊಳ್ಳಲು ಕೆಲವರು ಮುಗಿಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು