ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಬಾಹಿರವಾಗಿ ನಡೆದುಕೊಂಡಿರುವ ಕರ್ನಾಟಕ: ಗೋವಾ ಮುಖ್ಯಮಂತ್ರಿ

Last Updated 1 ಡಿಸೆಂಬರ್ 2020, 16:13 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೂರಿದ್ದಾರೆ.

‘ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ. ನಾವು ಕಾನೂನುಬಾಹಿರವಾಗಿ ನಡೆದುಕೊಂಡಿದ್ದರೆ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡುತ್ತೇನೆ’ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಸವಾಲಿಗೆ ಗೋವಾದಲ್ಲಿ ಪ್ರತಿಕ್ರಿಯಿಸಿರುವ ಸಾವಂತ್, ‘ಮಹದಾಯಿ ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಕಾಮಗಾರಿ ಆರಂಭಿಸಿದ ಬಗ್ಗೆ ಸಾಕ್ಷ್ಯಗಳಿವೆ. ಅವುಗಳನ್ನು ಮರು ಪರಿಶೀಲನಾ ಅರ್ಜಿಯೊಂದಿಗೆಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಮಹದಾಯಿ ನದಿ ನೀರು ತಿರುವು ಮಾಡಿರುವ ಬಗ್ಗೆ ಕರ್ನಾಟಕದ ವಿರುದ್ಧ ಸಾಕ್ಷ್ಯ ಸಲ್ಲಿಸಲಾಗಿದೆ. ಈ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಚರ್ಚಿಸುತ್ತೇವೆ’ ಎಂದಿದ್ದಾರೆ.

‘ನಾವು ಕಾನೂನು ಬಾಹಿರವಾಗಿ ಏನನ್ನೂ ಮಾಡಿಲ್ಲ. ಈ ವಿಷಯದಲ್ಲಿ ಪದೇ ಪದೇ‌ ಉತ್ತರಿಸಲು ಹೋಗುವುದಿಲ್ಲ’ ಎಂದು ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT