ಕಾಂಗ್ರೆಸ್‌ನಿಂದ ಬರಲು ಬಿಜೆಪಿ ಹಣದ ಆಫರ್ ನೀಡಿದ್ದು ನಿಜ: ಶ್ರೀಮಂತ ಪಾಟೀಲ

ಬೆಳಗಾವಿ: ‘ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ’ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು.
ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪೂರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಖಂಡಿತವಾಗಿಯೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
‘ನಾನು 20 ವರ್ಷ ಒಕ್ಕಲುತನ ಮಾಡಿದ್ದೇನೆ. ಕೃಷಿ ಖಾತೆ ನೀಡಿದರೆ ಒಳ್ಳೆಯ ಕೆಲಸ ಮಾಡುತ್ತಿದ್ದೆ. ಆದರೆ, ಜವಳಿ ಮತ್ತು ಅಲ್ಪಸಂಖ್ಯಾತ ಖಾತೆ ನೀಡಿದ್ದರು. ಅದನ್ನು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಶೀಘ್ರದಲ್ಲೇ ನಿಮಗೆ ಮಂತ್ರಿ ಸ್ಥಾನ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕೃಷಿ ಖಾತೆ ಕೊಟ್ಟರೆ ಚೆನ್ನಾಗಿ ನಿರ್ವಹಿಸುತ್ತೇನೆ. ಜನರಿಗೆ ಅನುಕೂಲ ಮಾಡಿಕೊಡುತ್ತೇನೆ’ ಎಂದರು.
ಇದನ್ನೂ ಓದಿ... ಮೈತ್ರಿ ಕಸರತ್ತು: ಎಚ್.ಡಿ. ಕುಮಾರಸ್ವಾಮಿ ಭೇಟಿಯಾದ ಸಚಿವ ಅಶೋಕ್
‘ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ. ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಎಂದು ಕೇಳಿದ್ದೆ’ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಹೇಳಿದ್ದಾರೆ. #Politics #ShrimantPatil #BSYediyurappa #BJP pic.twitter.com/ezPzthuDtP
— Prajavani (@prajavani) September 11, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.