ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಮಹಾನಗರ ಪಾಲಿಕೆ ಮತಗಟ್ಟೆ ಸಂಖ್ಯೆ 161ರಲ್ಲಿ ಶುಕ್ರವಾರ ಮತದಾನದ ವೇಳೆ, ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ತಮ್ಮ ಮೊಬೈಲ್ ಫೋನ್‌ನಲ್ಲಿದ್ದ ಬಾಳೆಹೊನ್ನೂರು ರಂಭಾಪುರಿ ಮಠದ ಲಿಂ.ವೀರಗಂಗಾಧರ ಸ್ವಾಮೀಜಿ ಫೋಟೊ ಪ್ರದರ್ಶಿಸಿ ಗಮನಸೆಳೆದರು.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ನಾನೂ ಎಂದಿಗೂ ಅವರನ್ನು ನಂಬಿದ್ದೇನೆ. ನಿತ್ಯವೂ ಆರಾಧಿಸುತ್ತೇನೆ. ಯಾವುದೇ ಉತ್ತಮ ಕೆಲಸಕ್ಕೆ ಮುನ್ನ, ಅಜ್ಜನನ್ನು ಸ್ಮರಿಸಿಕೊಂಡೆ ಮುಂದೆ ಹೆಜ್ಜೆ ಇಡುತ್ತೇನೆ. ಹಾಗಾಗಿ ಮತದಾನದ ವೇಳೆ ಫೋಟೊ ಪ್ರದರ್ಶಿಸಿ ಒಳಿತಾಗಲೆಂದು ಪ್ರಾರ್ಥಿಸಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.