ಶುಕ್ರವಾರ, ಅಕ್ಟೋಬರ್ 29, 2021
20 °C

ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ: ರಾಜು ಕಾಗೆ ಹೊಸ ಬಾಂಬ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘‌ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಜು ಕಾಗೆ ಹೇಳಿದರು.

ಕಾಗವಾಡ ತಾಲ್ಲೂಕಿನ ಮದಭಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯ 2–3 ಶಾಸಕರು ಕೂಡ ಬರಲಿದ್ದಾರೆ’ ಎಂದರು.

‘ರಾಜ್ಯ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅಲ್ಲಿ ಬೇಸರವಾಗಿರುವವರು ನಮ್ಮೊಂದಿಗೆ ಬರುತ್ತಾರೆ’ ಎಂದು ತಿಳಿಸಿದರು.

ಈ ವಿಷಯದ ಬಗ್ಗೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ, ‘ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರುವ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ. ಯಾರಾರು ಬರುತ್ತಾರೆ ಎಂಬ ಮಾಹಿತಿ ಸದ್ಯಕ್ಕೆ ನನಗಿಲ್ಲ’ ಎಂದರು.

ಇದನ್ನೂ ಓದಿ... ನಾವು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಜಾತಿ ಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು