ಬುಧವಾರ, ಸೆಪ್ಟೆಂಬರ್ 22, 2021
29 °C

ಬೆಳಗಾವಿ: ಕುಡಚಿ-ಉಗಾರ ಸೇತುವೆಯಲ್ಲಿ ಸಂಚಾರ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ.

ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್‌ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ ರಸ್ತೆಗಳು ಹಾಳಾಗಿವೆ. ಬೆಳೆಗಳು ಜಲಾವೃತಗೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು