ಶನಿವಾರ, ಸೆಪ್ಟೆಂಬರ್ 25, 2021
29 °C

ಬೆಳಗಾವಿ: ಕೊಯ್ನಾ ಜಲಾಶಯದಿಂದ ‌ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಮುಂದುವರಿದಿರುವುದರಿಂದ ಅಲ್ಲಿನ‌ ಕೊಯ್ನಾ ಜಲಾಶಯದಿಂದ ಶುಕ್ರವಾರ ಬೆಳಿಗ್ಗೆ 10ಸಾವಿರ ಕ್ಯುಸೆಕ್ ನೀರನ್ನು‌ ಹೊರ ಬಿಡಲಾಗುತ್ತಿದೆ.

ಇದರಿಂದ ಕೃಷ್ಣಾ ನದಿಯ‌ಲ್ಲಿ ನೀರಿನ‌ ಹರಿವಿನ ಪ್ರಮಾಣ ಹೆಚ್ಚಾಗಲಿದೆ. ಕ್ರಮೇಣ ಹೊರಹರಿವಿನ ಪ್ರಮಾಣವನ್ನು  20ಸಾವಿರ ಕ್ಯುಸೆಕ್‌ಗೆ ಹೆಚ್ಚಿಸಲಾಗುವುದು ಎಂದು ಅಲ್ಲಿನ‌ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಸ್ಪಿ‌ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಕೊಯ್ನಾದಿಂದ ಬಿಡುಗಡೆಯಾಗುವ ನೀರು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿ ಸೇರುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು