ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ಕಿ ಹರಿದ ವೇದಗಂಗಾ ನದಿ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

Last Updated 23 ಜುಲೈ 2021, 3:50 IST
ಅಕ್ಷರ ಗಾತ್ರ

ಬೆಳಗಾವಿ: ಭಾರಿ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಯಮಗರಣಿ ಬಳಿ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಪೊಲೀಸರು ಬ್ಯಾರಿಕೇಡ್‌ಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ್ದಾರೆ. ವಾಹನಗಳ ಮಾರ್ಗ ಬದಲಿಸುವಂತೆ ಸೂಚಿಸುತ್ತಿದ್ದಾರೆ. ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ, ಹಾವೇರಿ ಮೊದಲಾದ ಕಡೆಗಳಿಂದ ಮಹಾರಾಷ್ಟ್ರ ಮತ್ತು ಉತ್ತರ ಭಾರತಕ್ಕೆ ತೆರಳುವ ವಾಹನಗಳು ಈ ಮಾರ್ಗದಲ್ಲಿ ಬರಬಾರದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಹೊಸಪೇಟೆ -ವಿಜಯಪುರ, ಹುಬ್ಬಳ್ಳಿ – ವಿಜಯಪುರ ಮಾರ್ಗದಲ್ಲಿ ಸಂಚರಿಸುವಂತೆ ಅವರು ಸಲಹೆ ನೀಡಿದ್ದಾರೆ.

ಹಿರೋಬಾಗೇವಾಡಿ ಮತ್ತು ಹತ್ತರಗಿ ಟೋಲ್ ನಾಕಾ ಬಳಿ ವಾಹನಗಳನ್ನು ತಡೆಯಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ವಾಹನಗಳನ್ನೂ ಕೊಗನೋಳಿ ಚೆಕ್‌ಪೋಸ್ಟ್‌ನಿಂದಲೇ ವಾಪಸ್ ಕಳುಹಿಸುವ ಕಾರ್ಯವೂ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT