ಸೋಮವಾರ, ಅಕ್ಟೋಬರ್ 26, 2020
23 °C

ಬೆಳಗಾವಿ| ಕುಡಚಿ–ಉಗಾರ ಸೇತುವೆ ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ–ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್‌ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು.

‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. 25 ಮನೆಗಳಿಗೆ ಹಾನಿಯಾಗಿದೆ. ಸಂಪೂರ್ಣ ವರದಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು. ನಂತರ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದರು.

ಉಪ ತಹಶೀಲ್ದಾರ ಐ.ಕೆ. ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಎಸ್.ಎ. ಮಹಾಜನ, ಕಂದಾಯ ನಿರೀಕ್ಷಕ ರಾಜು ದಾನೋಳಿ, ಗ್ರಾಮ ಲೆಕ್ಕಾಧಿಕಾರಿ ಹನುಮಂತ ದಶವಂತ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು