ಬೆಳಗಾವಿ: ತಾಲ್ಲೂಕಿನ ಉಚಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲು ಹಾಗೂ ಕನ್ನಡ ಬಾವುಟ ಅಳವಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬುಧವಾರ ಪ್ರತಿಭಟನೆಗೆ ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಘೋಷಣೆ ಕೂಗುತ್ತ ಕಾರ್ಯಕರ್ತರು ಗ್ರಾಮದೊಳಗೆ ನುಗ್ಗಲು ಯತ್ನಿಸಿದರು. ಅವರನ್ನು ಪೊಲೀಸರು ತಡೆದಾಗ, ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮುಖಂಡರಾದ ವಾಜೀದ್ ಹಿರೇಕೋಡಿ, ಮಹಾಂತೇಶ ರಣಗಟ್ಟಿಮಠ, ಅನಿಲ ದಡ್ಡಿಮನಿ ಇತರರಿದ್ದರು.