ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತೇನೆ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಬಿಜೆಪಿಯಿಂದ ಭಾನುವಾರ ಆಯೋಜಿಸಿರುವ ಜನಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳನ್ನೇ ಘೋಷಣೆ ಮಾಡದ ವಿಚಿತ್ರ ಸ್ಥಿತಿಯಲ್ಲಿದೆ’ ಎಂದು ವ್ಯಂಗ್ಯವಾಡಿದರು.

‘ಬಿಜೆಪಿಯು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಕನಿಷ್ಠ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಈಗಾಗಲೇ ಪಕ್ಷದ ನಾಯಕರು ನಾಲ್ಕು ತಂಡಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದೇವೆ. ಮುಂಬರುವ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದ ನಾಯಕರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ’ ಎಂದರು.

‘ವಿರೋಧ ಪಕ್ಷದವರು ಕೇವಲ ಟೀಕೆ–ಟಿಪ್ಪಣಿಗಳಲ್ಲಿ ತೊಡಗದೆ ರಚನಾತ್ಮಕ ಸಲಹೆಗಳನ್ನು ನೀಡಿದರೆ ಕಾರ್ಯರೂಪಕ್ಕೆ ತರಲು ನಮ್ಮ ಸರ್ಕಾರ ಸಿದ್ಧವಿದೆ’ ಎಂದು ಹೇಳಿದರು.

‘ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ನಾನು ಹಿಂದೆ ನೀಡಿದ್ದ ಭರವಸೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಮುಖಂಡ ರವಿಕುಮಾರ ಇದ್ದರು.

ಇದನ್ನೂ ಓದಿ... ಲೂಟಿ ಅಂಗಡಿ ಬಂದ್: ಕಟೀಲ್ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ಹೀಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.