ಕಾಗವಾಡ: ತಾಲ್ಲೂಕಿನ ಕವಲಗುಡ್ಡ ಗ್ರಾಮದ ಕರಿಯೋಗಿ ಸಿದ್ದಾಶ್ರಮಕ್ಕೆ ಕನಕ-ಬಸವ ಭಾವಬೆಳೆಕು ಕಾರ್ಯಕ್ರಮದ ಅಂಗವಾಗಿ ಮೇ 10ರಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಸಿದ್ದಯೋಗಿ ಅಮರೇಶ್ವರ ಮಹಾರಾಜರು ತಿಳಿಸಿದರು.

ಶನಿವಾರ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಸಂಜೆ 6 ಗಂಟೆಗೆ ನಡೆಯುವ ಕನಕ-ಬಸವ ಭಾವ ಬೆಳಕು ಕಾರ್ಯಕ್ರಮದಲ್ಲಿ ಶತಾಯುಷಿ ರೈತರ ಪಾದ ಪೂಜೆ ಹಾಗೂ ಸಿದ್ದಶ್ರೀ ಅನುಭವ ಮಂಟಪದ ಅಡ್ಡಿಗಲ್ಲು ಸಮಾರಂಭದ ಸಾನ್ನಿಧ್ಯವನ್ನು ಸಿರಿವಾಳದ ಸೋಮಲಿಂಗೇಶ್ವರ ಪಟ್ಟದ ಸ್ವಾಮೀಜಿ, ನಯಾನಗರದ ಅಭಿನವ ಸಿದ್ದಲಿಂಗೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಲಕ್ಷ್ಮಣ ಸವದಿ, ಗೋಪಿಚಂದ ಪಡೋಳಕರ, ಗಣೇಶ ಹುಕ್ಕೇರಿ, ಮಹೇಂದ್ರ ತಮ್ಮಣ್ಣವರ,ಯುವ ಮುಖಂಡ ರಾಹುಲ ಜಾರಕಿಹೊಳಿ,ಮಾಜಿ ಸಚಿವ ಶ್ರೀಮಂತ ಪಾಟೀಲ, ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.