ಬೆಳಗಾವಿ: ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೋರೆ ಅವರು 40 ವರ್ಷಗಳಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ, ಸಹಕಾರ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.

ಬೇಲಿಮಠದ ಶಿವರುದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಕೋರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಭಾಕರ ಕೋರೆ ಮಾತನಾಡಿ, ‘ಬಸವಣ್ಣ ಈ ಜಗತ್ತು ಕಂಡ ಅಪ್ರತಿಮ ದಾರ್ಶನಿಕರು. 850 ವರ್ಷಗಳ ಹಿಂದೆ ಅವರು ಕೈಗೊಂಡ ಸಾಮಾಜಿಕ, ಧಾರ್ಮಿಕ, ಸಾಹಿತ್ಯ ಮತ್ತು ಶೈಕ್ಷಣಿಕ ಕ್ರಾಂತಿಯು ಇಂದಿಗೂ ಇಡೀ ಜಗತ್ತಿಗೆ ಆದರ್ಶಪ್ರಾಯವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.