ಮಂಗಳವಾರ, ಮಾರ್ಚ್ 21, 2023
23 °C

ವಿದ್ಯುತ್ ಕಂಬ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಹೊರವಲಯದ ಬೈಪಾಸ್‌ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ನಾಲ್ಕು ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

ಲೋಕೋಪಯೋಗಿ ಮತ್ತು ಹೆಸ್ಕಾಂ ಅಧಿಕಾರಿಗಳ ಸಮನ್ವಯ ಕೊರತೆಯಿಂದ ರಸ್ತೆ ಅಭಿವೃದ್ದಿಗೆ ವಿದ್ಯುತ್ ಕಂಬಗಳು ಅಡ್ಡಿಯಾಗಿದ್ದವು. ಕೋಟ್ಯಂತರ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿದ್ಯುತ್ ಕಂಬಗಳು ಅಡ್ಡಿಯಾಗಿದ್ದ ಕುರಿತು ‘ಪ್ರಜಾವಾಣಿ’  ಜ.31ರಂದು ವಿಶೇಷ ವರದಿ ಪ್ರಕಟಿಸಿತ್ತು.

ವರದಿ ಗಮನಿಸಿ ಶಾಸಕ ಮಹಾಂತೇಶ ದೊಡಗೌಡರ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣವೇ ರಸ್ತೆ ಅಭಿವೃದ್ಧಿಗೆ ಅಡ್ಡಿಯಾದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವಂತೆ ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚಿಸಿದ್ದರು. ಎರಡು ದಿನಗಳ ಹಿಂದೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದ್ದು, ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗಿದೆ.

ಮುಂದೆ ನಡೆಯಬಹುದಾಗಿದ್ದ ಅನಾಹುತ ತಪ್ಪಿಸಿದಂತಾಗಿದೆ. ವರದಿ ಪ್ರಕಟಿಸಿ ಸಾಮಾಜಿಕ ಕಳಕಳಿ ಮೆರೆದ ಪ್ರಜಾವಾಣಿ ಗೆ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರು ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ಸಮಸ್ಯೆ ಬಗೆಹರಿಸುವ ಪ್ರಜಾವಾಣಿ ಪಯಣ ಹೀಗೆ ಸಾಗಲಿ ಎಂದು ಹಾರೈಸಿದ್ದಾರೆ. ವರದಿ ಪ್ರಕಟಿಸಿ ಗಮನ ಸೆಳೆದಿದ್ದಕ್ಕೆ ಶಾಸಕ ಮಹಾಂತೇಶ ದೊಡಗೌಡರ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.