ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಲಗಾ: ಪ್ರಸಕ್ತ ವರ್ಷವೇ ಕೇಂದ್ರೀಯ ವಿದ್ಯಾಲಯ ಆರಂಭ

Last Updated 4 ಮಾರ್ಚ್ 2021, 15:51 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯದ ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಸದಲಗಾದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕೇಂದ್ರೀಯ ವಿದ್ಯಾಲಯ ಆಂಭವಾಗಲಿದೆ.

2021–22ನೇ ಸಾಲಿಗಾಗಿ ಸದಲಗಾದಲ್ಲಿ ಮಂಜೂರಾಗಿರುವ ಕೇಂದ್ರೀಯ ವಿದ್ಯಾಲಯದಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಅನುಮತಿ ನೀಡಲಾಗಿದೆ ಎಂದು ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ತಿಳಿಸಿದ್ದಾರೆ.

ಶಾಲೆಯು ಪೂರ್ಣ ಪ್ರಮಾಣದಲ್ಲಿ ಆರಂಭವಾದ ನಂತರ ಪ್ರತಿ ವರ್ಷ ಈ ಭಾಗದ 1000 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಲಭಿಸಲಿದೆ. ಕೇಂದ್ರ ಸರ್ಕಾರ ನೂತನ ಕಟ್ಟಡ ನಿರ್ಮಾಣ ಮಾಡಲಿದೆ. ರಾಜ್ಯ ಸರ್ಕಾರ ಒದಗಿಸಿರುವ ಕಟ್ಟಡದಲ್ಲೇ ಪ್ರಸಕ್ತ ಸಾಲಿನ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಆರಂಭಿಸಲು 2019ರಲ್ಲಿ ಮಂಜೂರು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT