ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘದ ಚುನಾವಣೆ: 13 ಸ್ಥಾನಕ್ಕೆ 41 ನಾಮಪತ್ರ

Published 18 ಜೂನ್ 2023, 15:43 IST
Last Updated 18 ಜೂನ್ 2023, 15:43 IST
ಅಕ್ಷರ ಗಾತ್ರ

ಖಾನಾಪುರ: ತಾಲ್ಲೂಕಿನ ಇಟಗಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ  ಇದೇ 25ರಂದು ಚುನಾವಣೆ ನಡೆಯಲಿದೆ.

ಈ ಚುನಾವಣೆಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ. ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ತಾಲ್ಲೂಕಿನ ದೊಡ್ಡ ಹಾಲು ಉತ್ಪಾದಕರ ಸಹಕಾರಿ ಸಂಘವಾಗಿರುವ ಇಟಗಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರಾದ ಅರವಿಂದ ಪಾಟೀಲ ಮತ್ತು ಡಾ.ಅಂಜಲಿ ನಿಂಬಾಳಕರ ಅವರ ಬಣದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಸಂಘದ ಕೆಲ ಸದಸ್ಯರು ಯಾವುದೇ ಬಣ ಪರ ನಿಲುವು ತಾಳದೇ ಸ್ವತಂತ್ರರಾಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT