ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾನಾಪುರ | ಮೂರು ಕಡೆ ಚೆಕ್‌ಪೋಸ್ಟ್ ಆರಂಭ

Published 20 ಮಾರ್ಚ್ 2024, 15:29 IST
Last Updated 20 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಖಾನಾಪುರ: ‘ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಣಕುಂಬಿ, ಲೋಂಡಾ ಮತ್ತು ಲಿಂಗನಮಠಗಳಲ್ಲಿ ತಲಾ ಒಂದು ಚೆಕ್‌ಪೋಸ್ಟ್ ತೆರೆಯಲಾಗಿದೆ’ ಎಂದು ಸಹಾಯಕ ಚುನಾವಣಾಧಿಕಾರಿ ಬಲರಾಮ್ ಚವ್ಹಾಣ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಕಾರವಾರ ಜಿಲ್ಲೆಯ ಕುಮಟಾದಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣಾ ಕೆಲಸಗಳು ಸುಗಮವಾಗಿ ನೆರವೇರುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳನ್ನು ನಿಯೋಜಿಸಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.

‘ಕ್ಷೇತ್ರದಲ್ಲಿ ಒಟ್ಟು 312 ಮತಗಟ್ಟೆಗಳಿದ್ದು, ಈ ವರ್ಷ 57 ಮತಗಟ್ಟೆಗಳನ್ನು ಹೊಸದಾಗಿ ಸ್ಥಾಪಿಸಲಾಗಿದೆ. ಅವುಗಳಲ್ಲಿ 6 ಸೂಕ್ಷ್ಮ ಹಾಗೂ 2 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಪ್ರತಿ 2 ಕಿ.ಮೀ. ಅಂತರದಲ್ಲಿ ಒಂದು ಮತಗಟ್ಟೆ ಇರಲಿದೆ’ ಎಂದು ಹೇಳಿದರು.

‘ಮದುವೆ, ಜಾತ್ರೆ ಸೇರಿದಂತೆ ಧಾರ್ಮಿಕ ಹಾಗೂ ರಾಜಕೀಯೇತರ ಕಾರ್ಯಕ್ರಮಗಳಿಗೆ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಲಾಗಿದೆ. ಯಾವುದೇ ಅನುಮತಿಯ ಅವಶ್ಯಕತೆ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT