ಖಾನಾಪುರ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಮಟ್ಟದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಮಂಗಳವಾರ ಜರುಗಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಲಕು ಆರೋಗ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ, ‘ಆರೋಗ್ಯ ಇಲಾಖೆಯ ದಾಖಲೆಗಳ ಪ್ರಕಾರ ತಾಲ್ಲೂಕಿನ 387 ಅಂಗನವಾಡಿಗಳು, 401 ಶಾಲೆಗಳು, 7 ಪದವಿಪೂರ್ವ ಮಹಾವಿದ್ಯಾಲಯಗಳು ಮತ್ತು 11 ವಸತಿ ನಿಲಯಗಳಲ್ಲಿರುವ ಒಟ್ಟು 49936 ಮಕ್ಕಳು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಬರಲಿದ್ದಾರೆ. ಇವರನ್ನು ಈಗಾಗಲೇ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ವೈದ್ಯಕೀಯ ನ್ಯೂನತೆಗಳಿರುವ 11 ಮಕ್ಕಳನ್ನು ಗುರುತಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿಫಾರಸು ಮಾಡಲಾಗಿದೆ‘ ಎಂದರು.

‘ತಹಶೀಲ್ದಾರ್ ಮೂಲಕ ತಲಾ ಒಂದೊಂದು ಇಲಾಖೆಗೆ ಒಂದೊಂದು ಮಗುವಿನ ಜವಾಬ್ದಾರಿ ನೀಡಿ, ಈ ಮಕ್ಕಳ ಚಿಕಿತ್ಸೆಗೆ ಗಮನಹರಿಸುವಂತೆ ಸೂಚಿಸಲಾಗಿದೆ’ ಎಂದು ವಿವರಿಸಿದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಆರೋಗ್ಯಾಧಿಕಾರಿಗಳಾದ ಡಾ.ರವಿರಾಜ ಪೈ, ಡಾ.ವಿನಾಯಕ ಕಿಣಗಿ, ತಹಶೀಲ್ದಾರ್ ದುಂಡಪ್ಪ ಕೋಮಾರ, ಹಿಂದುಳಿದ ವರ್ಗಗಳ ವಿಸ್ತೀಣರ್ಾಧಿಕಾರಿ ಗೌರಿ ಕಟಾಪುರಿಮಠ, ಸಮಾಜ ಕಲ್ಯಾಣ ಇಲಾಖೆ ನಿಲಯ ಮೇಲ್ವಿಚಾರಕ ಗಿರೀಶ ಕುರಹಟ್ಟಿ, ಐ.ಇ.ಆರ್.ಟಿ ಸಂಯೋಜಕ ಶಂಕರ ಕಮ್ಮಾರ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ. ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-21-1721709054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.