ಖಾನಾಪುರ: ನಗರದಲ್ಲಿ ಶನಿವಾರ ತಡರಾತ್ರಿ ಹೋಟೆಲ್‌ವೊಂದರಲ್ಲಿದ್ದ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆಯ ಪುತ್ರ ಶ್ರೀಧರ ಅಂಕಲಗಿ ಅವರಿಗೆ ಹೊರಹೋಗುವಂತೆ ಸೂಚಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಅನುಚಿತವಾಗಿ ವರ್ತನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಹೋಟೆಲ್ ಸಿಬ್ಬಂದಿ ಸೂಚಿಸಿದರೂ ಸ್ನೇಹಿತರೊಂದಿಗೆ ಊಟ ಮಾಡಿ ಶ್ರೀಧರ ಹರಟೆ ಹೊಡೆಯುತ್ತಾ ಕುಳಿತಿದ್ದರು. ಇದರಿಂದ ರೋಸಿಹೋದ ಹೋಟೆಲ್ ಮಾಲೀಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಸ್ತು ಪೊಲೀಸರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿ ನೀಡಿದ ದೂರಿನನ್ವಯ ಶ್ರೀಧರನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಸೂಚನೆಯಂತೆ ಬೆಳಗಾವಿಯ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.