ಭಾನುವಾರ, ಜುಲೈ 3, 2022
28 °C

ಖಾನಾಪುರ: ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖಾನಾಪುರ: ತಾಲ್ಲೂಕಿನ ರಾಜವಾಳಾ ಗೌಳಿವಾಡಾ ಶಾಲೆಯ ಶಿಕ್ಷಕರ ವಿರುದ್ಧ ಶನಿವಾರ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗೌಳಿವಾಡಾ ಶಾಲೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ನಿಂತು ಶನಿವಾರ ಮಧ್ಯಾಹ್ನ 12ರವರೆಗೆ ಶಾಲೆ ಇದ್ದರೂ ಶಿಕ್ಷಕರು ಬೇಗ ಕೊಠಡಿಗಳಿಗೆ ಬೀಗ ಜಡಿದು ತೆರಳಿದ್ದನ್ನು ಖಂಡಿಸಿದ ದೃಶ್ಯಗಳು ಹರಿದಾಡುತ್ತಿವೆ. 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಶಿಕ್ಷಕರು ನಿಯಮಿತವಾಗಿ ಶಾಲೆಗೆ ಬರುವುದಿಲ್ಲ, ಮಧ್ಯಾಹ್ನ ಬೇಗ ಮನೆಗೆ ತೆರಳುತ್ತಾರೆ, ಶಾಲಾ ಅವಧಿಯಲ್ಲಿ ವರ್ಗ ಕೊಠಡಿಯಲ್ಲಿ ಹಾಸಿಗೆ ಹಾಸಿ ಮಲಗುತ್ತಾರೆ. ತಮಗೆ ಶೌಚಾಲಯ ತೊಳೆಯುವಂತೆ, ನೀರು ತರುವಂತೆ ಕೆಲಸ ಹೇಳುತ್ತಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇಂಥ ಬೇಜವಾಬ್ದಾರಿ ಶಿಕ್ಷಕರಿಂದ ತಮ್ಮ ಶೈಕ್ಷಣಿಕ ಪ್ರಗತಿ ಕುಂಠಿತಗೊಂಡಿದೆ. ಕರ್ತವ್ಯಲೋಪ ಎಸಗುತ್ತಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡು ಬೇರೆ ಶಿಕ್ಷಕರ ವ್ಯವಸ್ಥೆ ಮಾಡುವಂತೆ ಹೇಳುವ ದೃಶ್ಯಗಳಿವೆ. ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಂಪರ್ಕ ಸಾಧ್ಯವಾಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು