ಖಾನಾಪುರ: ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಚುನಾವಣೆಯನ್ನು ನಡೆಸದ ಸಂಘದ ಹಾಲಿ ಅಧ್ಯಕ್ಷ ಎಂ.ಬಿ ಚವಲಗಿ, ಕಾರ್ಯದರ್ಶಿ ಪಿರಾಜಿ ಪಾಖರೆ, ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿ ಮತ್ತು ಜಿಲ್ಲಾ ಕಾರ್ಯದರ್ಶಿ ರಮೇಶ ಗೋಣಿ ಅವರ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಯಳ್ಳೂರ ಖಾನಾಪುರ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ.

ಸ್ಥಳೀಯ ಠಾಣೆಯಲ್ಲಿ ದೂರು ಸಲ್ಲಿಸಿ ಮಾತನಾಡಿದ ಬಸವರಾಜ ಯಳ್ಳೂರ, ‘ರಾಜ್ಯ ಚುನಾವಣಾಧಿಕಾರಿಗಳು ಏ.1ರಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ ಏ.11ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಳ್ಳಬೇಕಿತ್ತು. ಏ.12 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ಏ.11 ಮತ್ತು 12ರಂದು ಖಾನಾಪುರದ ಬಿಇಒ ಮತ್ತು ಬಿ.ಆರ್.ಸಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಬೆಳವಣಿಗೆಗಳು ಕಂಡುಬರಲಿಲ್ಲ’ ಎಂದರು.

ತಾಲ್ಲೂಕು ಚುನಾವಣಾಧಿಕಾರಿ ಈ ಸ್ಥಳಗಳಲ್ಲಿ ಹಾಜರಿ ಇರಲಿಲ್ಲ. ಆದ್ದರಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಬಹಳಷ್ಟು ಶಿಕ್ಷಕರು ತುಂಬಾ ಗೊಂದಲಕ್ಕೆ ಒಳಗಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸದೇ ಇರುವ ಬಗ್ಗೆ ಸಂಶಯ ಬಂದಿದ್ದರಿಂದ ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ವಿವರಿಸಿದರು.

ಬಳಿಕ ಅವರು ತಹಶೀಲ್ದಾರ್, ಬಿಇಒ ಮತ್ತು ಬಿ.ಆರ್.ಸಿ ಸಮನ್ವಯಾಧಿಕಾರಿ ಕಚೇರಿ ಬಳಿ ಶಿಕ್ಷಕ ಮತದಾರರೊಂದಿಗೆ ಪ್ರತಿಭಟನೆ ನಡೆಸಿದರು. ನಿಯಮ ಉಲ್ಲಂಘಿಸಿರುವ ನಾಲ್ವರನ್ನು ಬಂಧಿಸಬೇಕು. ತಕ್ಷಣದಿಂದಲೇ ಜಾರಿ ಬರುವಂತೆ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂದು ಅಧಿಕಾರಿಗಳನ್ನು ಆಗ್ರಹಿಸಿದರು.

ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-1642595147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.