ಬುಧವಾರ, ಜನವರಿ 22, 2020
20 °C

ಅತ್ಯಾಚಾರಿ ಆರೋಪಿಯ ತಂದೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯ ತಂದೆಯನ್ನು ಅಪಹರಣ ಯತ್ನ ಆರೋಪದ ಮೇಲೆ ಎಪಿಎಂಸಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಾಳು ಬೈರು ಬಾಳನಾಯಕ ಬಂಧಿತ.

‘ಇವರು ತಮ್ಮ ಪುತ್ರ ಸುನೀಲ್‌ನನ್ನು ಕಾಪಾಡುವುದಕ್ಕಾಗಿ, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದರು. ಇದು ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿದೆ’ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಪೊಲೀಸ್‌ ಠಾಣೆ, ಜಿಲ್ಲಾಸ್ಪತ್ರೆ ಆವರಣ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂದು ಆಗ್ರಹಿಸಿದ್ದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು