ಚನ್ನಮ್ಮನ ಕಿತ್ತೂರು: ನಾಡಿನ ಪರಂಪರೆಯ ಸಂರಕ್ಷಣೆ ಕಾರ್ಯದಲ್ಲಿ ಯುವ ಪೀಳಿಗೆಯು ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಪರಂಪರೆಗಳು ಮನುಕುಲದ ಅಸ್ಮಿತೆಯಾಗಿವೆ, ಅವುಗಳನ್ನು ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಖಾನಾಪುರ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಧ್ಯಾಪಕ ಚಂದ್ರಶೇಖರ ತಾಬೋಜಿ ತಿಳಿಸಿದರು.

ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕಿನಾವಿವ ಸಂಘದ ಕಲಾ ಮತ್ತು ವಾಣಿಜ್ಯ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಲ್ಮಠದ ಸಭಾಭವನದಲ್ಲಿ ಶನಿವಾರ ನಡೆದ ವಿಶ್ವ ಪರಂಪರೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾನ್ನಿಧ್ಯ ವಹಿಸಿದ್ದ ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪರಂಪರೆಗಳು ದೇಶದ ಗೌರವದ ಪ್ರತೀಕವಾಗಿ ನಿಲ್ಲುತ್ತವೆ ಎಂದರು.

ಪುರಾತತ್ವ ಮತ್ತು ಪರಂಪರೆ ಇಲಾಖೆಯ ಕ್ಯುರೆಟರ್ ರಾಘವೇಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇದಕ್ಕೂ ಮೊದಲು ಕಲ್ಮಠದ ಆವರಣದಲ್ಲಿರುವ ದೊರೆಗಳ ಸಮಾಧಿ ತಾಣಗಳು ಹಾಗೂ ಕಟ್ಟಡಗಳನ್ನು ಸ್ವಚ್ಚಗೊಳಿಸಲಾಯಿತು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಎಫ್. ಜಕಾತಿ, ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ಪದವಿ ಕಾಲೇಜು ಪ್ರಾಚಾರ್ಯರಾದ ಬಿ. ಎನ್. ಹೊಸಮನಿ, ಎಚ್. ಕೆ. ನಾಗರಾಜ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಬಿ. ದಳವಾಯಿ, ಪ್ರಾಧ್ಯಾಪಕ ಶಿವಾಜಿ ಗುಡಾಜಿ, ಮುಖ್ಯಶಿಕ್ಷಕರಾದ ಮಹೇಶ ಚನ್ನಂಗಿ, ಬಿ. ಸಿ. ಬಿದರಿ, ಎಂ. ಆರ್. ಶಹಪುರ, ಎನ್. ಜಿ. ಪಾಟೀಲ, ಮಂಜುನಾಥ ಕಳಸಣ್ಣವರ, ಮಲ್ಲಿಕಾರ್ಜುನ ಉಳ್ಳಾಗಡ್ಡಿ, ಮಂಜುನಾಥ ದೊಡ್ಡಣ್ಣವರ, ಎನ್ಎಸ್ಎಸ್ ವಿದ್ಯಾರ್ಥಿಗಳು, ನಾಗರಿಕರು ಇದ್ದರು.

ಕೃತಿ ರಾಘವೇಂದ್ರ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮಹೇಶ ಹೊಂಗಲ ಸ್ವಾಗತಿಸಿದರು. ಶಿಕ್ಷಕ ರಾಜಶೇಖರ ರಗಟಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-21-1367748424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.