ರಾಮದುರ್ಗ: ತಾಲ್ಲೂಕಿನ ಯರಿಕಿತ್ತೂರಿನ ನೂತನ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ಉದ್ಘಾಟನೆಗೆ ಬಾಳೆಹೊನ್ನೂರಿನ ವೀರಸೋಮೇಶ್ವರ ದೇಶಿಕೇಂದ್ರದ ರಂಭಾಪುರಿ ಸ್ವಾಮೀಜಿ ಮೇ 12ರಂದು ಕಿತ್ತೂರು ಗ್ರಾಮಕ್ಕೆ ಬರಲಿದ್ದಾರೆ.

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಗುರುನಾಥಗೌಡ ಮಾದಾಪೂರ ಅವರು ಕಿತ್ತೂರಿನಲ್ಲಿ ಒಂದೂವರೆ ಎಕರೆ ಜಮೀನು ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕೆ ದಾನ ನೀಡಿದ್ದರು. ಅದರಲ್ಲಿ ಶಿಕ್ಷಣ ಇಲಾಖೆ ₹1.20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರೌಢಶಾಲೆ ಕಟ್ಟಡ ನಿರ್ಮಿಸಿದ್ದು, ಅದರ ಉದ್ಘಾಟನೆ ಮಂಗಳವಾರ ನಡೆಯಲಿದೆ.

2022-23ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಅಭಿಯಾನದಡಿ ಉನ್ನತೀಕರಣಗೊಂಡ ತಾಲ್ಲೂಕಿನ ಕಿತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾದರಿ ಶಾಲೆಯ ಮತ್ತು ಕೇಂದ್ರ ಯೋಜನಾ ಅನುಮೋದನಾ ಮಂಡಳಿಯಿಂದ ವಾರ್ಷಿಕ ಕ್ರಿಯಾ ಯೋಜನೆಯಲ್ಲಿಅನುಮೋದನೆಗೊಂಡ ಕಾಮಗಾರಿಗಳು ಹೊಸ ಶಾಲಾ ಕಟ್ಟಡ ಮತ್ತು ಬಲವರ್ಧನೆ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಿದ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡಗಳ ಉದ್ಘಾಟನೆ ನಡೆಯಲಿದೆ.

ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಜಗದೀಶ ಶೆಟ್ಟರ್, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಲಖನ್ ಜಾರಕಿಹೊಳಿ ಸೇರಿದಂತೆ ಅನೇಕರು ಹಾಜರಿರುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-21-1594154930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.