ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರು ತಹಶೀಲ್ದಾರ್‌ ಲೋಕಾಯುಕ್ತ ಬಲೆಗೆ

Last Updated 25 ನವೆಂಬರ್ 2022, 17:49 IST
ಅಕ್ಷರ ಗಾತ್ರ

ಬೆಳಗಾವಿ: ಹತ್ತು ಎಕರೆ ಜಮೀನಿಗೆ ಸಂಬಂಧಿಸಿದಂತೆ ಖಾತೆಯೊಂದರ ಬದಲಾವಣೆಗೆ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಶುಕ್ರವಾರ ₹ 2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಹಶೀಲ್ದಾರ್‌ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಪ್ರಸನ್ನ ಜಿ. ಆರೋಪಿಗಳಾಗಿದ್ದು ಬೆಳಗಾವಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಿತ್ತೂರು ತಾಲ್ಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಜೇಬ ಇನಾಮದಾರ ಎಂಬುವವರು ತಮ್ಮ ತಂದೆ ಬಾಪುಸಾಹೇಬ್ ಇನಾಮದಾರ ಅವರ ಹೆಸರಿನಲ್ಲಿದ್ದ ಜಮೀನಿನನ್ನು ತಮ್ಮ ಹೆಸರಿಗೆ ಖಾತಾ ಬದಲಾವಣೆ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ₹5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ರಾಜೇಂದ್ರ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT