ಮುಖ್ಯಮಂತ್ರಿ ಗಮನ ಕೊಡಬೇಕು: ಕಲ್ಮಠ ಶ್ರೀ
‘ಚನ್ನಮ್ಮನ ಕಿತ್ತೂರು ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಗಮನ ಕೊಡುತ್ತಿಲ್ಲ. ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತ್ಯೇಕ ಅಧಿಕಾರಿ ಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿದೆ. ಅಲ್ಲದೆ ಪ್ರಾಧಿಕಾರದ ಕಚೇರಿಯನ್ನು ಕಿತ್ತೂರು ಪಟ್ಟಣದಲ್ಲೇ ತೆರೆಯಬೇಕು. ಪಟ್ಟಣದ ಅಭಿವೃದ್ಧಿ ಮತ್ತು ಕಿತ್ತೂರು ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಳ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಬೇಕು’ ಎಂದು ಇಲ್ಲಿನ ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಒತ್ತಾಯಿಸಿದರು.