ಶನಿವಾರ, ಜುಲೈ 24, 2021
25 °C

ಕೆಎಲ್‌ಇ ಘಟಿಕೋತ್ಸವ: ಆನ್‌ಲೈನ್‌ನಲ್ಲಿ ಪ್ರಸಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ (ಕೆಎಎಚ್‌ಇಆರ್‌) 10ನೇ ಘಟಿಕೋತ್ಸವ ಇದೇ 14ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜೆಎನ್‌ಎಂಸಿ ಆವರಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ.

ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆಲವೇ ಜನರಿಗೆ ಅವಕಾಶ ನೀಡಲಾಗಿದ್ದು, ಇನ್ನುಳಿದವರಿಗೆ ವೀಕ್ಷಿಸಲು ಅನುಕೂಲವಾಗಲು ಸಾಮಾಜಿಕ ಜಾಲತಾಣಗಳ ಮೂಲಕ ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ. ಅಕಾಡೆಮಿಯ ವೆಬ್‌ಸೈಟ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದೆ ಎಂದು ಕುಲಸಚಿವ ಪ್ರೊ.ಡಾ.ವಿ.ಎ. ಕೊಠಿವಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಕೆಎಲ್‌ಇ ಕಾರ್ಯಾಧ್ಯಕ್ಷ ಹಾಗೂ ಕೆಎಎಚ್‌ಇಆರ್‌ ಕುಲಾಧಿಪತಿ ಅಧ್ಯಕ್ಷತೆ ವಹಿಸಲಿದ್ದಾರೆ.

ವಿವಿಧ ವಿಭಾಗಗಳ ಚಿನ್ನದ ಪದಕವೂ ಸೇರಿದಂತೆ 1,316 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಗುವುದು. ಇವುಗಳ ಜೊತೆಗೆ 11 ಪಿಎಚ್‌ಡಿ, 9– ಸ್ನಾತಕೋತ್ತರ ವೈದ್ಯಕೀಯ (ಡಿ.ಎಂ/ ಎಂ.ಸಿಎಚ್‌), 329 ಸ್ನಾತಕೋತ್ತರ ಪದವಿ, 51 ಪಿ.ಜಿ ಡಿಪ್ಲೋಮಾ, 14 ಸರ್ಟಿಫಿಕೇಟ್‌ ಕೋರ್ಸ್‌, 10 ಶಿಷ್ಯವೇತನ ಹಾಗೂ 16 ಡಿಪ್ಲೋಮಾ ಪ್ರಮಾಣ ಪತ್ರಗಳ ವಿತರಣೆಯೂ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು