ಶುಕ್ರವಾರ, ಡಿಸೆಂಬರ್ 4, 2020
21 °C

ಶುದ್ಧ ಸಂಕಲ್ಪ, ಬದ್ಧತೆಯಿಂದ ಪ್ರಗತಿ ಸಾಧ್ಯ: ಡಾ.ಬಸವರಾಜ ಜಗಜಂಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಶುದ್ಧ ಸಂಕಲ್ಪ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಪ್ರಗತಿ ಸಾಧ್ಯ’ ಎಂದು ಸಾಹಿತಿ ಡಾ.ಬಸವರಾಜ ಜಗಜಂಪಿ ಹೇಳಿದರು.

ಇಲ್ಲಿನ ಲಿಂಗರಾಜ ಕಾಲೇಜಿನಲ್ಲಿ ಶುಕ್ರವಾರ ನಡೆದ ಕೆಎಲ್ಇ ಸಂಸ್ಥೆಯ 105ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇತಿಹಾಸವನ್ನು ತಿಳಿದವರು ಮಾತ್ರ ಇತಿಹಾಸ ನಿರ್ಮಿಸಲು ಸಾಧ್ಯ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಮಾತ್ರವೇ ಯಶಸ್ಸನು ಪಡೆಯಬಹುದು. ಕೆಎಲ್‌ಇ ಸಂಸ್ಥೆಯನ್ನು ಸ್ಥಾಪಿಸಿದಂತಹ ಸಪ್ತಋಷಿಗಳ ಕಾರ್ಯ ದಕ್ಷತೆ ಮತ್ತು ಅವರ ನಿಸ್ವಾರ್ಥ ಸೇವೆ ಮಾದರಿಯಾಗಿದೆ. ಪ್ರಸ್ತುತ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಕಠಿಣ ಪರಿಶ್ರಮದಿಂದಾಗಿ ಇಂದು ಸಂಸ್ಥೆ ದೇಶದಾದ್ಯಂತ ತನ್ನ ಶಾಖೆ ವಿಸ್ತರಿದೆ. ಸಪ್ತಋಷಿಗಳು ನೀಡಿದ ಬೆಳಕನ್ನು ಇಂದಿನ ಯುವ ಜನತೆ ತಮ್ಮ ದಾರಿದೀಪನ್ನಾಗಿಸಿಕೊಂಡು ಜೀವನದಲ್ಲಿ ಅಭಿವೃದ್ಧಿ ಕಾಣಬೇಕು’ ಎಂದರು.

ಪ್ರಾಚಾರ್ಯ ಡಾ.ಆರ್.ಎಂ. ಪಾಟೀಲ ಮಾತನಾಡಿದರು ಲಕ್ಷ್ಮಿ ಶಿವಣ್ಣವರ ಹಾಗೂ ಸಂಗಡಿಗರು ಪಾರ್ಥನಾ ಗೀತೆ ಪ್ರಸ್ತುತಪಡಿಸಿದರು. ಪಿಯುಸಿ ವಿಭಾಗದ ಪ್ರಾಚಾರ್ಯೆ ಗಿರಿಜಾ ಹಿರೇಮಠ ಸ್ವಾಗತಿಸಿದರು. ಡಾ.ಮಹೇಶ ಗುರನಗೌಡರ ನಿರೂಪಿಸಿದರು. ಜೆ.ಎ. ಮಠಪತಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.