ಬೆಳಗಾವಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ರಾಷ್ಟ್ರೀಯ ಆಸ್ಪತ್ರೆಯ ಮಾನ್ಯತಾ ಮಂಡಳಿಯಿಂದ (ಎನ್ಎಬಿಎಚ್) ಸಂಪೂರ್ಣ ಗುಣಮಟ್ಟದ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಅತಿ ಹೆಚ್ಚು ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎನ್ಎಬಿಎಚ್ ಮಾನ್ಯತೆ ಪಡೆದ ಪ್ರಥಮ ಆಸ್ಪತ್ರೆ ಇದಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಮಾನ್ಯತೆ ಪಡೆದ ಮೊದಲ ಅತೀ ಹೆಚ್ಚು ಹಾಸಿಗೆಯುಳ್ಳ ಹಾಗೂ ಬಹುವಿಧ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದೆ. ಮಾನ್ಯತೆ ಪ್ರಕ್ರಿಯೆಯು ರೋಗಿಯ ಸುರಕ್ಷತೆ, ಸೋಂಕು ನಿಯಂತ್ರಣ, ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳ ಸಾಮರ್ಥ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುವ ಸಮಗ್ರ ಮೌಲ್ಯಮಾಪನ ಪ್ರಕ್ರಿಯೆಯನ್ನು ಒಳಗೊಂಡಿದೆ.

‘ನಮ್ಮ ಆಸ್ಪತ್ರೆಯು ಪೂರ್ಣ ಪ್ರಮಾಣದ ಎನ್ಎಬಿಎಚ್ ಮಾನ್ಯತೆಯನ್ನು ಪಡೆದಿರುವುದಕ್ಕೆ ಹೆಮ್ಮೆಯಾಗಿದ್ದು, ಈಗ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಸಾಮಾನ್ಯ ಜನರಿಗೆ ಅತ್ಯಾಧುನಿಕ ಹಾಗೂ ಅತ್ಯುತ್ತಮ ಗುಣಮಟ್ಟದ ರೋಗಿಗಳ ಆರೈಕೆಯನ್ನು ಕಲ್ಪಿಸಲು ನಾವು ಬದ್ಧರಾಗಿದ್ದೇವೆ. 120ಕ್ಕೂ ಅಧಿಕ ನೀತಿ ನಿರೂಪಣೆಗಳನ್ನು ಮಾಡಲಾಗಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕರ್ನಲ್ ಡಾ.ಎಂ. ದಯಾನಂದ ಹೇಳಿದ್ದಾರೆ.

ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಆಫ್ ಹಾಸ್ಪಿಟಲ್ಸ್ ಮತ್ತು ಹೆಲ್ತ್ಕೇರ್ ಪ್ರೊವೈಡರ್ಸ್ (ಎನ್ಎಬಿಎಚ್) 2005ರಲ್ಲಿ ಸ್ಥಾಪಿತವಾದ ಸಂಸ್ಥೆ. ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತೆ ನೀಡುವ ಮಂಡಳಿ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.