ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯ ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ಸರ್ಕಾರದಿಂದ ₹ 25 ಲಕ್ಷ ಅನುದಾನ

Last Updated 19 ಡಿಸೆಂಬರ್ 2020, 6:54 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನ 10 ಸಂಶೋಧನಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ ₹ 25 ಲಕ್ಷ ಅನುದಾನ ಮಂಜೂರು ಮಾಡಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಕರ್ನಾಟಕ ಆವಿಷ್ಕಾರ ಕೌಶಲ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯಸ್ಥೆ ಡಾ.ಸಂಧ್ಯಾ ಅನ್ವೇಕರ್ ಅವರು ಕಾಲೇಜಿಗೆ ಭೇಟಿ ನೀಡಿ ಸಂಶೋಧನಾ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಮತ್ತು ಲಭ್ಯವಿರುವ ಮೂಲ ಸೌಲಭ್ಯಗಳನ್ನು ಪರಿಶೀಲನೆ ನಡೆಸಿ ಮೆಚ್ಚುಗೆ
ವ್ಯಕ್ತಪಪಡಿಸಿದರು.

‘ಸ್ಥಳೀಯ ಅಗತ್ಯಕ್ಕೆ ಅನುಸಾರವಾಗಿ ಸಂಶೋಧನೆ ಕೈಗೊಳ್ಳಲು ಇನ್ಕ್ಯುಬೇಷನ್ ಕೇಂದ್ರವನ್ನು ಕಾಲೇಜು ಹೊಂದಿದೆ. ಇದರ ಮಾರ್ಗದರ್ಶನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹತ್ತು ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂಶೋಧನೆ ನಡೆಸಲು ಇದೊಂದು ಮಹತ್ವದ ಮತ್ತು ಹೆಮ್ಮೆಯ ವಿಷಯವಾಗಿದೆ’ ಎಂದುಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದರು.

ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅಭಿನಂದಿಸಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಎಸ್.ಸಿ. ಮೆಟಗುಡ್ ವಿದ್ಯಾರ್ಥಿಗಳು ಮತ್ತು ಸಂಯೋಜಕರನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT