ಭಾನುವಾರ, ಜನವರಿ 17, 2021
26 °C

ಬೆಳಗಾವಿಯ ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿಗೆ ಸರ್ಕಾರದಿಂದ ₹ 25 ಲಕ್ಷ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನ 10 ಸಂಶೋಧನಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ ₹ 25 ಲಕ್ಷ ಅನುದಾನ ಮಂಜೂರು ಮಾಡಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಕರ್ನಾಟಕ ಆವಿಷ್ಕಾರ ಕೌಶಲ ಅಭಿವೃದ್ಧಿ ಕಾರ್ಯಕ್ರಮದ ಮುಖ್ಯಸ್ಥೆ ಡಾ.ಸಂಧ್ಯಾ ಅನ್ವೇಕರ್ ಅವರು ಕಾಲೇಜಿಗೆ ಭೇಟಿ ನೀಡಿ ಸಂಶೋಧನಾ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಮತ್ತು ಲಭ್ಯವಿರುವ ಮೂಲ ಸೌಲಭ್ಯಗಳನ್ನು ಪರಿಶೀಲನೆ ನಡೆಸಿ ಮೆಚ್ಚುಗೆ
ವ್ಯಕ್ತಪಪಡಿಸಿದರು.

‘ಸ್ಥಳೀಯ ಅಗತ್ಯಕ್ಕೆ ಅನುಸಾರವಾಗಿ ಸಂಶೋಧನೆ ಕೈಗೊಳ್ಳಲು ಇನ್ಕ್ಯುಬೇಷನ್ ಕೇಂದ್ರವನ್ನು ಕಾಲೇಜು ಹೊಂದಿದೆ. ಇದರ ಮಾರ್ಗದರ್ಶನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹತ್ತು ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂಶೋಧನೆ ನಡೆಸಲು ಇದೊಂದು ಮಹತ್ವದ ಮತ್ತು ಹೆಮ್ಮೆಯ ವಿಷಯವಾಗಿದೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ತಿಳಿಸಿದರು.

ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅಭಿನಂದಿಸಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಎಸ್.ಸಿ. ಮೆಟಗುಡ್ ವಿದ್ಯಾರ್ಥಿಗಳು ಮತ್ತು ಸಂಯೋಜಕರನ್ನು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು