ಬುಧವಾರ, ಜುಲೈ 28, 2021
21 °C

ಜಿಐಟಿ: ಯೋಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಜಿಐಟಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆನ್‌ಲೈನ್‌ ವೇದಿಕೆಯಲ್ಲಿ ಆಚರಿಸಲಾಯಿತು.

‘ಸೌಹಾರ್ದ ಮತ್ತು ಶಾಂತಿಗಾಗಿ ಯೋಗ’ ಶೀರ್ಷಿಕೆಯಲ್ಲಿ ಆಚರಿಸಲಾಯಿತು. ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆಯುಷ್ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲಾಯಿತು.

ಜಿಐಟಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ವಿ. ಕಡಗದಕೈ ಅವರು ಸ್ವತಃ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಯೋಗ ಅಧಿವೇಶನ ತೆಗೆದುಕೊಂಡರು. ಆರೋಗ್ಯಕರ ಜೀವನಕ್ಕೆ ಯೋಗದ ಮಹತ್ವವನ್ನು ವಿವರಿಸಿದರು. ಕ್ಷಮಾ ಕಡಗದಕೈ ಸೂರ್ಯನಮಸ್ಕಾರ ಮತ್ತು ಆಸನಗಳನ್ನು ಪ್ರದರ್ಶಿಸಿದರು. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.