ಕೌಜಲಗಿ: ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಿಕೊಡಲು ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕೂಡಲೇ ಭರ್ತಿ ಮಾಡಲು ಕ್ರಮ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಗೋಕಾಕ ತಾಲೂಕಿನ ಕೌಜಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖಾಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದರು.

ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ತಕ್ಷಣವೇ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಕೌಜಲಗಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಅನುಕೂಲವಾಗಲು ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ರೋಗಿಗಳಿಗೆ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಆರೋಗ್ಯಾಧಿಕಾರಿಗಳು ನೀಗಾ ವಹಿಸಿ ರೋಗಿಗಳಿಗೆ ಅಗತ್ಯವಿರುವ ಸೇವೆ ಕಲ್ಪಿಸಲು ಮುಂದಾಗಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ನಾಗರಿಕರಿಗೆ ಅನುಕೂಲವಾಗಲು ಇಲಾಖೆಯು ಮುಂದೆ ಬರಬೇಕು. ಆಸ್ಪತ್ರೆ ನಿರ್ಮಾಣವಾಗಿ 10 ತಿಂಗಳು ಗತಿಸಿದರೂ ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ನೇಮಕಾತಿ ಆಗಿಲ್ಲ. ನಾಗರಿಕರಿಗೆ ಸೌಲಭ್ಯಗಳನ್ನು ನೀಡದಿದ್ದಲ್ಲಿ ಆಸ್ಪತ್ರೆ ಮಾಡಿ ಏನೂ ಪ್ರಯೋಜನವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅತೀ ಶೀಘ್ರವಾಗಿ ಖಾಲಿಯಿರುವ ಸ್ಥಾನಗಳಿಗೆ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಬೇಕು. ಗುತ್ತಿಗೆಯ ಆಧಾರದ ಮೇಲೆಯಾದರೂ ನೇಮಕಾತಿಯನ್ನು ಮಾಡಿಕೊಳ್ಳಬೇಕು. ಅತೀ ದೊಡ್ಡ ಆರೋಗ್ಯ ಕೇಂದ್ರವಿದ್ದರೂ ಒಂದಿಬ್ಬರು ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ನಾಗರಿಕರಿಗೆ ತುಂಬ ತೊಂದರೆಯಾಗುತ್ತಿದೆ. ಹೆರಿಗೆ ಮತ್ತು ಪ್ರಸೂತಿ ತಜ್ಞರು ಹಾಗೂ ಚಿಕ್ಕ ಮಕ್ಕಳ ತಜ್ಞರು, ತಜ್ಞ ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗಾಲಯ ತಂತ್ರಜ್ಞ ಸೇರಿದಂತೆ ಹಲವು ಸ್ಥಾನಗಳು ಖಾಲಿಯಿವೆ. ಆಯುಷ್ಯ ವೈದ್ಯರು ಸೇರಿದಂತೆ ಇಬ್ಬರು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದAತಹ ದೊಡ್ಡ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನೇಮಕಕ್ಕೆ ಚುರುಕು ಮುಟ್ಟಿಸಲು ಅಧಿಕಾರಿಗಳು ಮುತುವರ್ಜಿ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಯ ಸ್ಥಿತಿ-ಗತಿ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ ಸೇರಿದಂತೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-1297039531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.