ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿ ಶಿವಲಿಂಗ ಪಾಟೀಲ ಬಂಧನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಈತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಒಂದು ವರ್ಷದ ಹಿಂದೆ ಸೆಂಟರ್ ಮುಚ್ಚಿದ್ದ. ಪ್ರಕರಣದಲ್ಲಿ ಈಗಾಗಲೇ ಸಿಸಿಬಿ ಬಂಧಿಸಿರುವ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುತ್ತಿದ್ದ. ಪರೀಕ್ಷೆಯ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ನೀಡುತ್ತಿದ್ದ’ ಎಂದು ಅಪರಾಧ ವಿಭಾಗದ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.
ಇದನ್ನೂ ಓದಿ... ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೆಪಿಎಸ್‌ಸಿ ನೌಕರ ಸಿಸಿಬಿ ವಶಕ್ಕೆ
Shivling Patil, an accused in Karnataka Public Service Commission question paper leak case, has been arrested from Belagavi. He used to run a coaching centre which closed one year back: Sandeep Patil, Joint Commissioner of Police (Crime), Bengaluru
— ANI (@ANI) February 17, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.