ಸೋಮವಾರ, ಸೆಪ್ಟೆಂಬರ್ 26, 2022
22 °C

ಕೆಪಿಟಿಸಿಎಲ್‌ ನೇಮಕಾತಿ ಅಕ್ರಮ: ಐವರ ಜಾಮೀನು ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಬಂಧಿತರಾದ ಐವರ ಜಾಮೀನು ಅರ್ಜಿಯನ್ನು, ಗೋಕಾಕದ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.

ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ, ಮಾಲದಿನ್ನಿಯ ಸುನೀಲ ಅಜ್ಜಪ್ಪ ಭಂಗಿ, ಬೆಣಚಿನಮರಡಿಯ ಸಿದ್ಧಪ್ಪ ಕೆಂಚಪ್ಪ ಕೊತ್ತಲ, ವೀರನಗಡ್ಡಿಯ ಸಂತೋಷ ಪ್ರಕಾಶ ಮಾಣಗಾವಿ, ಮಾಲದಿನ್ನಿಯ ರೇಣುಕಾ ವಿಠಲ ಜವಾರಿ ಅವರ ಜಾಮೀನು ಅರ್ಜಿ ಶನಿವಾರ ವಿಚಾರಣೆಗೆ ಬಂದವು.

ಪ್ರಕರಣದ ಪ್ರಮುಖ ಆರೋಪಿ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ ಈವರೆಗೆ 13 ಮಂದಿಯನ್ನು ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು