ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ‍ಪಿಟಿಸಿಎಲ್‌ ಪರೀಕ್ಷೆ ಅಕ್ರಮ: ಕಿಂಗ್‌ಪಿನ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Last Updated 30 ಆಗಸ್ಟ್ 2022, 15:58 IST
ಅಕ್ಷರ ಗಾತ್ರ

ಬೆಳಗಾವಿ: ಕೆ‍ಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮದ ಪ್ರಮುಖ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ 12ನೇ ಹೆಚ್ಚುವರಿ ನ್ಯಾಯಾಲಯ ವಜಾ ಮಾಡಿದೆ.

‘ಬೆಳಗಾವಿ ಮೂಲದ ಸಂಜೀವ ಭಂಡಾರಿ ಎಂಬ ಆರೋಪಿ ಈ ಪ್ರಕರಣದಲ್ಲಿ ‘ಕಿಂಗ್‌ಪಿನ್‌’ ಆಗಿದ್ದಾನೆ. ಪ್ರಕರಣ ಹೊರಬಿದ್ದಾಗಿನಿಂದ ತಲೆಮರೆಸಿಕೊಂಡಿದ್ದಾನೆ. ಹೊರರಾಜ್ಯದಲ್ಲಿ ಇದ್ದುಕೊಂಡೇ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ. ಮಂಗಳವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ವಜಾ ಮಾಡಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪರೀಕ್ಷೆಯಲ್ಲಿ ಸ್ಮಾರ್ಟ್‌ವಾಚ್‌, ಬ್ಲೂಟೂತ್‌ ಉಪಕರಣಗಳನ್ನು ಬಳಸಿ ಅಕ್ರಮ ಎಸಗಿದ ಆರೋಪದಡಿ ಈಗಾಗಲೇ 12 ಮಂದಿಯನ್ನು ಬಂಧಿಸಲಾಗಿದೆ. ಈ ಎಲ್ಲರ ಪ್ರಕರಣಗಳಲ್ಲೂ ಬೇಕಾಗಿರುವ ಸಂಜೀವ ಭಂಡಾರಿ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಆರೋಪಿ ಪತ್ತೆಗಾಗಿ ಮೂರು ತಂಡ ರಚಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT