ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ | ಕೃಷಿ ಭಾಗ್ಯ: ಅರ್ಜಿ ಆಹ್ವಾನ

Published 22 ಡಿಸೆಂಬರ್ 2023, 13:03 IST
Last Updated 22 ಡಿಸೆಂಬರ್ 2023, 13:03 IST
ಅಕ್ಷರ ಗಾತ್ರ

ರಾಮದುರ್ಗ: ಕೃಷಿ ಭಾಗ್ಯ ಯೋಜನೆಯು ಮರು ಜಾರಿಯಾಗಿದ್ದು, ರಾಮದುರ್ಗ ತಾಲ್ಲೂಕಿನ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್‌.ಎಫ್‌. ಬೆಳವಟಗಿ ಕೋರಿದ್ದಾರೆ.

‘ಈಗಾಗಲೇ ಯೋಜನೆಯ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. ಹಾಗೆಯೇ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಮೀನುಗಾರಿಕಾ ಇಲಾಖೆಯಿಂದ ಯಾವುದೇ ಯೋಜನೆಯಲ್ಲಿ ಕೃಷಿ ಹೊಂಡ ಸೌಲಭ್ಯ ಪಡೆದಿರುವ ರೈತರೂ ಈಗ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ನಮೂನೆಯು ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ತಮ್ಮ ಖಾತೆ, ಉತಾರ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು, ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ್ದರೆ ಜಾತಿ ಪ್ರಮಾಣ ಪತ್ರ, ತೋಟಗಾರಿಕೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಡೆದ ಎನ್ಒಸಿ ಪತ್ರವನ್ನು ಲಗತ್ತಿಸಿ ಡಿ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT