ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ ಸೋಮವಾರ 1,19,202 ಕ್ಯೂಸೆಕ್ ಹೊರ ಹರಿವು ಇದೆ.

ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ 4.7 ಸೆಂ.ಮೀ, ನವಜಾದಲ್ಲಿ 4.1 ಸೆಂ.ಮೀ, ಮಹಾಬಳೇಶ್ವರದಲ್ಲಿ 8.7 ಸೆಂ.ಮೀ ಮಳೆ ದಾಖಲಾಗಿದೆ.

105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮಹಾರಾಷ್ಟ್ರದ ಕೊಯ್ನಾ ಆಣೆಕಟ್ಟೆಯಲ್ಲಿ 85.44 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಆಣೆಕಟ್ಟೆಯಲ್ಲಿ ಒಳ ಹರಿವು 38,142 ಕ್ಯೂಸೆಕ್ ಇದ್ದು, ಹೊರ ಹರಿವು 31746 ಕ್ಯೂಸೆಕ್ ಇದೆ. 8.32 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮಹಾರಾಷ್ಟ್ರದ ರಾಧಾನಗರಿ ಆಣೆಕಟ್ಟೆಯು ಶೇ.100 ರಷ್ಟು ಭರ್ತಿಯಾಗಿದ್ದು, 4356 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಕೃಷ್ಣಾ ಹಾಗೂ ಉಪನದಿಗಳ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿಯ ಮಹಾರಾಷ್ಟ್ರದ ಆಣೆಕಟ್ಟೆಗಳು ಬಹುತೇಕ ಭರ್ತಿಯಾಗಿದ್ದು, ಯಾವಾಗ ಬೇಕಾದರೂ ಹೆಚ್ಚಿನ ಪ್ರಮಾಣದ ನೀರನ್ನು ಬಿಡುವ ಸಾಧ್ಯತೆಗಳು ಇರುವದರಿಂದ ಬೆಳಗಾವಿ ಜಿಲ್ಲಾಡಳಿತ ನದಿ ತೀರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾಗಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ’ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 10,1250 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 17,952 ಕ್ಯೂಸೆಕ್ ಒಳ ಹರಿವು ಇದ್ದು, ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ ಕೃಷ್ಣಾ ನದಿಗೆ 1,19,202 ಕ್ಯೂಸೆಕ್ ಹೊರ ಹರಿವು ಇದೆ.

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಯ 6 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸುತ್ತು ಬಳಸಿಕೊಂಡು ಸಂಚರಿಸಲು ಪರ್ಯಾಯ ಮಾರ್ಗಗಳು ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.