ಚಿಕ್ಕೋಡಿ: ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ನೀರಿನ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಈಗಾಗಲೇ ಕೆಲವೊಂದಿಷ್ಟು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮಹಾರಾಷ್ಟ್ರದ ಕೃಷ್ಣಾ ನದಿಯ ಜಲಾನಯನ ಪ್ರದೇಶ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬಿದ್ದ ಮಳೆಯಿಂದ ಕೃಷ್ಣಾ ನದಿಯ ಹರಿವು ಗುರುವಾರ ಸಂಜೆ ವೇಳೆಗೆ 2,26,707 ಕ್ಯೂಸೆಕ್ನಷ್ಟು ಹೆಚ್ಚಳವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉಪ ವಿಭಾಗ ವ್ಯಾಫ್ತಿಯಲ್ಲಿ 10 ಸೇತುವೆಗಳು ಜಲಾವೃತಗೊಂಡಿದ್ದು, ದೂಧಗಂಗಾ ನದಿ ನೀರಿನಲ್ಲಿ ಏರಿಕೆಯಾಗಿದೆ.

ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬಳಿಯ ಯಕ್ಸಂಬಾ-ದಾನವಾಡ, ಸದಲಗಾ ಪಟ್ಟಣದ ಬಳಿಯ ಸದಲಗಾ-ಬೋರಗಾಂವ ಸೇತುವೆಗಳು ಮುಳುಗಡೆಯಾಗಿದ್ದರಿಂದ ಉಪ ವಿಭಾಗದಲ್ಲಿ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 12ಕ್ಕೇರಿದೆ. ಕರ್ನಾಟಕ-ಮಹಾರಾಷ್ಟ್ರದ ನಡುವೆ ಸಂಪರ್ಕ ಕಲ್ಪಿಸುತ್ತಿದ್ದ ಈ ಎರಡೂ ಸೇತುವೆಗಳು ಜಲಾವೃತಗೊಂಡಿದ್ದರಿಂದ ಈ ಗ್ರಾಮಗಳಿಗೆ ಸಂಪರ್ಕಿಸಲು 25-30 ಕಿ.ಮೀ ಸುತ್ತು ಬಳಸಬೇಕಾದ ಅನಿವಾರ್ಯತೆ ಇದೆ.

ಜಲಾವೃತಗೊಂಡಿರುವ ಸೇತುವೆ ಬಳಿಯಲ್ಲಿ, ನದಿ ತೀರದ ಆಯಕಟ್ಟಿನ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಗುರುವಾರ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದ್ದರೂ ಕೃಷ್ಣಾ ಹಾಗೂ ಉಪ ನದಿಗಳ ನೀರಿನಲ್ಲಿ ಏರಿಕೆಯಾಗುತ್ತಲೇ ಇದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 1,85,875 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 40,832 ಕ್ಯೂಸೆಕ್ ಹೊರ ಹರಿವು ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆಯ ಬಳಿಯಲ್ಲಿ 2,26,707 ಕ್ಯೂಸೆಕ್ ಹೊರ ಹರಿವು ಇದೆ.

ಹೀಗಾಗಿ ಕೃಷ್ಣಾ , ದೂಧಗಂಗಾ, ವೇದಗಂಗಾ ನದಿಗಳ ತೀರದಲ್ಲಿರುವ ಜನರು ತಮ್ಮ ಸಾಮಾನು ಸರಂಜಾಮು ಹಾಗೂ ಜಾನುವಾರುಗಳಿಂದ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕೃಷ್ಣಾ ನದಿ ತಟದಲ್ಲಿರುವ ನರಸಿಂಹವಾಡಿಯ ದತ್ತ ಮಂದಿರ ಸೇರಿದಂತೆ ನದಿ ತೀರದ ಪ್ರಮುಖ ದೇವಸ್ಥಾನಗಳು ಜಲಾವೃತಗೊಂಡಿವೆ.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾವಿ ಉಪ ವಿಭಾಗದ ಕೃಷ್ಣಾ ನದಿ ತೀರದ ಜುಗೂಳ, ಮಂಗಾವತಿ, ಉಗಾರ-ಕುಡಚಿ ಸೇತುವೆ, ಕುಸನಾಳ ಮುಂತಾದ ಕಡೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ ಅವರು ತಾಲ್ಲೂಕಿನ ಯಡೂರ, ಚಂದೂರ, ಮಾಂಜರಿ, ಯಕ್ಸಂಬಾ, ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ಹಾಗೂ ಕೃಷ್ಣಾ ನದಿ ತೀರಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಕುರಿತು ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಉಪ ವಿಭಾಗದ ದೂಧಗಂಗಾ ನದಿ ನೀರಿನಿಂದ ತೊಂದರೆಗೊಳಗಾದ ನಿಪ್ಪಾಣಿ ತಾಲ್ಲೂಕಿನ ಹುನ್ನುರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದ್ದು, 22 ಪುರುಷರು, 44 ಮಹಿಳೆಯರು ಹಾಗೂ 25 ಮಕ್ಕಳು ಸೇರಿದಂತೆ 101 ಜನರು ಆಶ್ರಯ ಪಡೆದುಕೊಂಡಿದ್ದಾರೆ.

ಜಲಾವೃತಗೊಂಡ ಸೇತುವೆಗಳ ಸಂಖ್ಯೆ 12ಕ್ಕೆ ಏರಿಕೆ | ಗ್ರಾಮಗಳ ರಸ್ತೆ ಸಂಪರ್ಕ ಕಡಿತ ಸುತ್ತುವರಿದು ಸಂಚರಿಸುತ್ತಿರುವ ಜನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.