ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕೃಷ್ಣಾ ನದಿಗೆ ಸೇರುತ್ತಿದೆ 97,265 ಕ್ಯುಸೆಕ್ ನೀರು

ಅಕ್ಷರ ಗಾತ್ರ

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಶುಕ್ರವಾರ ಬೆಳಿಗ್ಗೆ ಒಟ್ಟು 97, 265 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕಿನ ಒಟ್ಟು 9 ಕೆಳಮಟ್ಟದ ಸೇತುವೆಗಳು ಮುಳುಗಡೆ ಸ್ಥಿತಿಯಲ್ಲಿಯೇ ಇವೆ.

ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮತ್ತು ತಾಲ್ಲೂಕಿನ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ದೂಧ್‌ಗಂಗಾ ನದಿಯಿಂದ 24,640 ಕ್ಯುಸೆಕ್ ಮತ್ತು ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 72,625 ಕ್ಯುಸೆಕ್ ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಒಟ್ಟು 97,265 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಮಹಾರಾಷ್ಟ್ರದ ಯಾವುದೇ ಜಲಾಶಯಗಳಿಂದ ಇನ್ನೂ ನೀರು ಬಿಡುಗಡೆ ಮಾಡಿಲ್ಲ. ಕೇವಲ ಮಳೆ ನೀರು ಮಾತ್ರ ಹರಿದು ಬರುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ- ಯಡೂರ, ಮಾಂಜರಿ- ಬಾವಾನ ಸೌಂದತ್ತಿ, ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲ್ಲೂಕಿನ ಬೂದಿಹಾಳ- ಕೊಡ್ನಿ, ಮಾಂಗೂರ-ಕುನ್ನೂರ, ಕುನ್ನೂರ- ಬಾರವಾಡ, ಭೋಜವಾಡಿ- ಶಿವಾಪುರವಾಡಿ, ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ ಮತ್ತು ಕಾರದಗಾ- ಭೋಜ ಗ್ರಾಮಗಳ ಮಧ್ಯೆ ಇರುವ ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿವೆ. ವಾಹನ ಮತ್ತು ಜನ ಸಂಚಾರಕ್ಕೆ ಪರ್ಯಾಯ ಮಾರ್ಗಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT