ಮಂಗಳವಾರ, ಅಕ್ಟೋಬರ್ 27, 2020
24 °C

ಕೃಷ್ಣೆಗೆ ಸೇರುವ ನೀರಿನ ಪ್ರಮಾಣ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದ ಘಟ್ಟ‌ ಪ್ರದೇಶದಲ್ಲಿ ಮತ್ತು ಚಿಕ್ಕೋಡಿ ತಾಲ್ಲೂಕಿನಲ್ಲಿ ಮಳೆ ಕ್ಷೀಣಿಸಿದೆ. ಆದರೂ, ಕೃಷ್ಣಾ ಮತ್ತು ಉಪನದಿಗಳಿಗೆ ಸೇರುವ ನೀರಿನ ಪ್ರಮಾಣ 24 ಗಂಟೆಗಳಲ್ಲಿ 10ಸಾವಿರ ಕ್ಯುಸೆಕ್‌ ಹೆಚ್ಚಳವಾಗಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.15 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 14ಸಾವಿರ ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.29 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.

ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಪಂಚಗಂಗಾ ಮತ್ತು ಕೃಷ್ಣಾ ನದಿಗಳ ಸಂಗಮ ಸ್ಥಳದಲ್ಲಿರುವ ನರಸಿಂಹವಾಡಿಯ ದತ್ತ ಮಂದಿರ ಸಂಪೂರ್ಣ ಮುಳುಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು