ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಕುಡಚಿ ಗ್ರಾಮೀಣ ‘ಕಂಟೈನ್ಮೆಂಟ್‌ ಝೋನ್‌’ ಮುಕ್ತ

Last Updated 17 ಜೂನ್ 2020, 16:53 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮೀಣ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್‌ (ನಿರ್ಬಂಧಿತ) ಪ್ರದೇಶದಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಅಲ್ಲಿನ ಐವರಿಗೆ ಕೋವಿಡ್–19 ಸೋಂಕು ತಗುಲಿತ್ತು. ಅವರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದವರ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಹೀಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ‘ನಿರ್ಬಂಧಿತ ಪ್ರದೇಶ’ದಿಂದ ಬಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕುಡಚಿ ಪಟ್ಟಣವನ್ನು ಕಂಟೈನ್ಮೆಂಟ್‌ ಝೋನ್‌ನಿಂದ ಮುಕ್ತಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT