ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ‘ಜನ ಪಾಲ್ಗೊಂಡರೆ ಪಂಚಾಯಿತಿ ವ್ಯವಸ್ಥೆಗೆ ಬಲ’

Last Updated 1 ಜೂನ್ 2020, 16:27 IST
ಅಕ್ಷರ ಗಾತ್ರ

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸೋಮವಾರ ಉದ್ಘಾಟಿಸಿದರು.

‘ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನರು ಪಂಚಾಯಿತಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ‘ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಸರ್ಕಾರದಿಂದ ಒತ್ತು ನೀಡಲಾಗುತ್ತಿದೆ. ಜನರ ಸಹಭಾಗಿತ್ವ ಇದ್ದಾಗ ಇದು ಇನ್ನಷ್ಟು ಬಲಗೊಳ್ಳುತ್ತದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಮುಖಂಡರು, ಹಿರಿಯರು ಇದ್ದರು.

ಇದೇ ವೇಳೆ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಭೇಟಿಯಾದ ಶಾಸಕರು, ತಮ್ಮ ಲಕ್ಷ್ಮಿ ತಾಯಿ ಪ್ರತಿಷ್ಠಾನದಿಂದ ದಿನಸಿ ಕಿಟ್‌ಗಳನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT