ಶನಿವಾರ, ಸೆಪ್ಟೆಂಬರ್ 26, 2020
22 °C

ಕಾಂಗ್ರೆಸ್ ನಿಜ ಬಣ್ಣ ಬಯಲು: ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಡಿ.ಜೆ. ಹಳ್ಳಿ ಗಲಭೆ ನಂತರ ಕಾಂಗ್ರೆಸ್ ತನ್ನ ನಿಜ ಬಣ್ಣ ಬಯಲು ಮಾಡಿಕೊಂಡಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದಾರೆ.

‘ತಮ್ಮ ಪಕ್ಷದ ದಲಿತ ನಾಯಕನಿಗೆ ರಕ್ಷಣೆ ನೀಡಲಾಗದ ಕಾಂಗ್ರೆಸ್ ನಾಯಕರು, ಘಟನೆಗೆ ಕಾರಣನಾದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡಿದರು’ ಎಂದು ಹೇಳಿದ್ದಾರೆ.

‘ಇವರ ಮಿಥ್ಯಾರೋಪಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರಶ್ನಿಸಿದಾಗ, ನಾಯಕತ್ವದ ದಿವಾಳಿತನ ಪ್ರದರ್ಶಿಸಿದ ಕಾಂಗ್ರೆಸ್, ಶಾಸಕ ಜಮೀರ್ ಅಹಮ್ಮದ್ ಮೂಲಕ ಉತ್ತರ ಕೊಡಿಸಲು ಹೊರಟಿದೆ’ ಎಂದಿದ್ದಾರೆ.

‘ಸಿದ್ಧಾಂತ ಬದ್ಧ, ನೀತಿ ರಾಜಕಾರಣ ಮಾಡುವ ಸಂತೋಷ್ ಜೀ ಬಗ್ಗೆ ಮಾತನಾಡಿ ಕಾಂಗ್ರೆಸ್ ತನ್ನಲ್ಲಿನ ನಾಯಕತ್ವದ ಕೊರತೆ ಮಾತ್ರವಲ್ಲ, ನೈತಿಕತೆಯ ಕೊರತೆಯನ್ನು ಜಗತ್ತಿಗೆ ಪರಿಚಯಿಸುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಛೇಡಿಸಿದ್ದಾರೆ.

‘ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಶಕ್ತಿಗಳಾಗಿ ಬೆಳೆಯುವಂತೆ ಪ್ರೋತ್ಸಾಹ ನೀಡಿ, ಈಗ ಪೊಲೀಸರ ಮೇಲೆ ಕರ್ತವ್ಯ ಲೋಪದ ಆರೋಪ ಹೊರಿಸುತ್ತಿರುವ ಕಾಂಗ್ರೆಸಿಗರಿಗೆ ಆತ್ಮಸಾಕ್ಷಿಯೇ ಇಲ್ಲ’ ಎಂದು ಟ್ವೀಟ್‌ ಕೂಡ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು