ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನದಲ್ಲಿ ರೈತರ ಬಗ್ಗೆ ಚರ್ಚೆಯಾಗಲಿ: ಸವದಿ

Published 16 ನವೆಂಬರ್ 2023, 16:43 IST
Last Updated 16 ನವೆಂಬರ್ 2023, 16:43 IST
ಅಕ್ಷರ ಗಾತ್ರ

ಬೆಳಗಾವಿ: ‘ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಹಲವು ಯೋಜನೆ ನನೆಗುದಿಗೆ ಬಿದ್ದಿವೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾದ ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕಿದೆ’ ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.

‘ಆಲಮಟ್ಟಿ ಜಲಾಶಯದ ಎತ್ತರ 524 ಮೀಟರ್‌ಗೆ ಹೆಚ್ಚಿಸಿ, ಅದರಲ್ಲಿ ಮುಳುಗಡೆಯಾಗುವ ಜಮೀನು ಮತ್ತು ಕಟ್ಟಡಗಳಿಗೆ ಪರಿಹಾರ ಕೊಡುವ ದೊಡ್ಡ ಸವಾಲು ನಮ್ಮ ಮುಂದಿದೆ. ಇದರ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆಯಾಗಬೇಕು, ಕಲಾಪದಲ್ಲಿ ಈ ಭಾಗದ ಶಾಸಕರು ಈ ಧ್ವನಿ ಎತ್ತಬೇಕು’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ತಾಂತ್ರಿಕ ಸಮಸ್ಯೆಗಳಿಂದ ಮಹದಾಯಿ ಯೋಜನೆ ನಿಂತಿದೆ. ಈ ಯೋಜನೆ ಅನುಷ್ಠಾನವಾಗಬೇಕೆಂದು ಬಸವರಾಜ ಬೊಮ್ಮಾಯಿ ಮತ್ತು ಸಿ.ಸಿ.ಪಾಟೀಲ ಜೆಡಿಎಸ್‌ನಲ್ಲಿದ್ದಾಗ ಪ್ರತಿಭಟಿಸಿದ್ದರು. ಹಿಂದಿನ ಅವಧಿಯಲ್ಲಿ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ, ಗೋವಾ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆದರೆ, ಯೋಜನೆ ಬಗ್ಗೆ ಅವರು ಆಸಕ್ತಿ ತೋರಿಸಲಿಲ್ಲ. ಬೆಳಗಾವಿ ಅಧಿವೇಶನದಲ್ಲಾದರೂ ಈ ಬಗ್ಗೆ ಧ್ವನಿ ಎತ್ತುವರೆ ಎಂಬುದನ್ನು ಕಾದು ನೋಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT