ಶನಿವಾರ, ಮೇ 15, 2021
24 °C

ಕೇಂದ್ರ, ರಾಜ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಿ: ಲಕ್ಷ್ಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭಾನುವಾರ ಪ್ರಚಾರ ನಡೆಸಿದರು.

‘ಜನಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತೂ ಕಾಳಜಿ‌ ಇಲ್ಲ. ಪ್ರತಿಯೊಬ್ಬರೂ ಮತದ ಮೂಲಕ ಈ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು. ಒಳ್ಳೆಯ ದಿನಗಳು ಎನ್ನುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವುದರಲ್ಲಿ ನಿರತವಾಗಿವೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದು, ಬಡವರ‌ ಮೇಲೆ ಬರೆ ಎಳೆಯುತ್ತಿವೆ’ ಎಂದು ದೂರಿದರು.

‘ಬಡವರು, ಶ್ರಮಿಕರು ಹಾಗೂ ರೈತರ ಬಗ್ಗೆ ಈ ಸರ್ಕಾರಗಳಿಗೆ ಕಾಳಜಿ ಇಲ್ಲ. ಮೊದಲು ಬೆಲೆ ಏರಿಕೆ ನಿಯಂತ್ರಿಸಬೇಕು’ ಎಂದರು.

‘ದೇಶದಲ್ಲಿ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.