ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಅಭಿಯಾನಕ್ಕೆ ಲಕ್ಷ್ಮಿ ಚಾಲನೆ

Last Updated 26 ಜುಲೈ 2021, 12:09 IST
ಅಕ್ಷರ ಗಾತ್ರ

ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿರುವ 2021-22ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಾಲ್ಲೂಕಿನ ಹಿಂಡಲಗಾ ಗ್ರಾಮದ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

‘ಅಭಿಯಾನದ ಮೂಲಕ ಗ್ರಾಮ-ಗ್ರಾಮಗಳಿಗೆ ತೆರಳಿ ಕೃಷಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು. ಸಮಗ್ರ ಕೃಷಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಸಗೊಬ್ಬರ, ಬಿತ್ತನೆಬೀಜ, ಕ್ರಿಮಿನಾಶಕಗಳು ಹಾಗೂ ವಿಮೆಯ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೋರಿದರು.

ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಆರ್.ಬಿ. ನಾಯ್ಕರ, ಕೃಷಿ ಅಧಿಕಾರಿ ಅರುಣ ಕಾಪಸೆ, ಸಹಾಯಕ ಕೃಷಿ ಅಧಿಕಾರಿ ಸಿ.ಎಸ್. ನಾಯ್ಕ, ಚೇತನ ಅಗಸ್ಗೆಕರ, ರೋಹನ ಪಾವಸೆ, ವಿಠ್ಠಲ ದೇಸಾಯಿ, ರಾಮಚಂದ್ರ ಕುದ್ರೆಮನಿ, ಅಶೋಕ ಕಾಂಬಳೆ, ರೇಣುಕಾ ಬಾತ್ಕಂಡೆ, ಅಲ್ಕಾ ಕಿತ್ತೂರ, ಬಾಗಣ್ಣ ನರೋಟಿ, ಗಜಾನನ ಬಾಂಡೆಕರ, ಯಲ್ಲಪ್ಪ ಕಾಕತ್ಕರ, ಪ್ರಕಾಶ ಬೆಳಗುಂದ್ಕರ, ಗಜು ಕಾಕತ್ಕರ, ಮೃಣಾಲ ಹೆಬ್ಬಾಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT