ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಸಚಿವರ ವಜಾಕ್ಕೆ ಲಕ್ಷ್ಮಿ, ಚನ್ನರಾಜ ಆಗ್ರಹ

Last Updated 7 ಏಪ್ರಿಲ್ 2022, 11:22 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕೋಮು ಸೌಹಾರ್ದ ಕೆಡಿಸುವ ಯತ್ನ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ತಕ್ಷಣ ವಜಾಗೊಳಿಸಿ ಬಂಧಿಸಬೇಕು. ಜೊತೆಗೆ, ಈ ಹುನ್ನಾರದ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗ್ರಹಿಸಿದ್ದಾರೆ.

ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು, ‘ಬೈಕ್- ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಜಗಳ ನಡೆದ ಘಟನೆಯಲ್ಲಿ ಕೊಲೆ ಆಗಿದೆ. ಆ ಪ್ರಕರಣವನ್ನು ಗೃಹ ಸಚಿವರು ತಿರುಚಲು ಯತ್ನಿಸಿದ್ದಾರೆ. ಇಡೀ ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರಿಂದ ಇಂತಹ ಆಘಾತಕಾರಿ ಹೇಳಿಕೆ ನಿರೀಕ್ಷಿಸಲು ಸಾಧ್ಯವಿಲ್ಲ. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದ್ದಂತೆ ಕಾಣುತ್ತಿದೆ’ ಎಂದು ದೂರಿದ್ದಾರೆ.

‘ತನಿಖೆ ನಡೆಸಿ, ಹೇಳಿಕೆಯ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು’ ಎಂದು ಒತ್ತಾಯಿಸಿದ್ದಾರೆ.

‘ರಾಜ್ಯದಲ್ಲಿ ಹಲವು ತಿಂಗಳಿನಿಂದ ಅಶಾಂತಿ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಒಂದಿಲ್ಲೊಂದು ವಿವಾದ ಸೃಷ್ಟಿಸುತ್ತಿದೆ. ಇದರ ಮುಂದುವರಿದ ಭಾಗದಂತೆ ಗೃಹ ಸಚಿವರ ಹೇಳಿಕೆಯು ಕಾಣುತ್ತಿದೆ. ಇಡೀ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಮತ್ತಷ್ಟು ಅಪಾಯಕಾರಿ ಸನ್ನಿವೇಶವನ್ನು ಎದುರಿಸಬೇಕಾದೀತು’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT